
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಸಿಲ ಧಗೆ ಕೊಂಚ ಕಡಿಮೆಯಾಗಿದ್ದು, ಮೋಡಕವಿದ ವಾತಾವರಣವಿದೆ. ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ 11 ಜಿಲ್ಲೆಗಳಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತುಂತುರು ಮಳೆಯಾದರೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಮುಂಗಾರುಪೂರ್ವ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇತರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ