
ಪ್ರಗತಿವಾಹಿನಿ ಸುದ್ದಿ: ಬೇಸಿಗೆ ಆರಂಭದ ಹೊತ್ತಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಹಾವೇರಿ, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ.
ಚಿಕ್ಕಮಗಳೂರು, ಹಾವೇರಿ, ಧಾರವಾಡ, ಬೀದರ್, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಮಂಡ್ಯ, ರಾಮನಗರದಲ್ಲಿ ಇಂದು ಸಾಧಾರಣ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.