Karnataka News

*ಮೂರು ದಿನ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಾಟಕ ಭಾಗದ ಬೆಳಗವೈ, ಬೀದರ್, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು, ಯಾದಗಿರಿ, ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

Home add -Advt

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಹಾಸನ, ಬಳ್ಳಾರಿ, ವಿಜಯನಗರ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Back to top button