ಪ್ರಗತಿವಾಹಿನಿ ಸುದ್ದಿ: ಈಗಾಗಲೇ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಈ ನಡುವೆ ಕೆಲವೇ ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ದಾವಣಗೆರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಗಾಳಿಯ ವೇಗ ಗಂಟೆಗೆ 30-40ಕಿ.ಮೀ ಇರಲಿದೆ. ಹಾಸನ, ಧಾರವಾಡ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ