LatestUncategorized

*ಬಿರುಗಾಳಿ ಸಹಿತ ಭಾರಿ ಮಳೆ; 9 ಜಿಲ್ಲೆಗಳಲ್ಲಿ ಕಟ್ಟೆಚ್ಚರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದಲ್ಲಿ ಜುಲೈ 8ರವರೆಗೆ ಬಿರಿಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 9 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಸಾರ್ವಜನಿಕರು, ಪ್ರವಾಸಿಗರು ನದಿ, ನೀರಿನ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ತೆಚ್ಚರಕ್ಕೆ ಸೂಚಿಸಿದೆ. ಮಕ್ಕಳು ಸಾರ್ವಜನಿಕರು ವಿದ್ಯುತ್ ಕಂಬಗಳ ಬಳಿ ಹೋಗದಂತೆ ಹಾಗೂ ತುಂಡಾದ ವಿದ್ಯುತ್ ತಂತಿ ಗಳಿಂದ ದೂರವಿರುವಂತೆ ಸೂಚಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ರಾಯಚೂರು, ವಿಜಯಪುರ, ಬಳ್ಳಾರಿ, ಕಲಬುರ್ಗಿ, ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಕರಾವಳಿಯಲ್ಲಿ ಈಗಾಗಲೇ ಬಿರುಗಾಳಿ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯ ಅಮವಾಸ್ಯೆಬೈಲಿನ ಗ್ರಾಮದಲ್ಲಿ ಭಾರಿ ಸುಂಟರಗಾಳಿ ಬೀಸುತ್ತಿದೆ. ಮರಗಳು, ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button