ಪ್ರಗತಿವಾಹಿನಿ ಸುದ್ದಿ; ರಾಜ್ಯದಲ್ಲಿ ಮತ್ತೆ ಹಿಂಗಾರು ಮಳೆ ಆರ್ಭಟ ಜೋರಾಗಿದೆ. ಒಂದು ದಿನ ಬಿಡುವು ಪಡೆದುಕೊಂಡಿದ್ದ ಮಳೆರಾಯ ಮತ್ತೆ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ನಾಳೆ ಹಾಗೂ ಸೋಮವಾರ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇಂದು ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ನಾಳೆ ಹಾಗೂ ನಾಡಿದ್ದು, ಅತಿಹೆಚ್ಚು ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ 35-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಚಂಡಮಾರುತ ವಾತಾವರಣವಿರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ವಹಿಸಲು ಸೂಚಿಸಕಾಗಿದೆ.
ಸೋಮವಾರ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿಯಿಂದ ಮಳೆಯಾಗಿದ್ದು, ಬೆಳಿಗ್ಗೆ ನಗರದ ಹಲವೆಡೆ ಮಳೆಯಾಗುತ್ತಿದೆ. ಸಂಜೆ ವೇಳೆ ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ