Politics

*ಶಿಗ್ಗಾಂವಿಯಲ್ಲಿ ಯಾಸೀರ್ ಪಠಾಣ್ ಗೆ ಅಚ್ಚರಿ ಗೆಲುವು*

ಪ್ರಗತಿವಾಹಿನಿ ಸುದ್ದಿ: ಮೂರು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರಬಿದ್ದಿದೆ. ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಅರ್ಭರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ತೀವ್ರ ಮುಖಭಂಗವಾಗಿದೆ.

Home add -Advt

ಶಿಗ್ಗಾಂವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಯಿ ಪುತ್ರ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ವಿರುದ್ಧ ತೀವ್ರ ಮುಖಭಂಗ ಅನುಭವಿಸಿರುವ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಹಿನ್ನಡೆಯಾಗುತ್ತಿದ್ದಂತೆ ಮತ ಎಣಿಕೆ ಕೇಂದ್ರದಿದಲೇ ಹೊರ ನಡೆದಿದ್ದಾರೆ.

ಶಿಗ್ಗಾಂವಿಯಲ್ಲಿ ಆರಂಭದಿಂದಲೂ ಭರತ್ ಬೊಮ್ಮಾಯಿ ಗೆಲುವು ಖಚಿತ ಎನ್ನಲಾಗುತ್ತಿತ್ತು. ಆದರೆ ಶಿಗ್ಗಾಂವಿ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಅಚ್ಚರಿ ಗುಲುವು ಪಡೆದಿದ್ದಾರೆ. 13 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಯಾಸೀರ್ ಪಠಾಣ್ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.

Related Articles

Back to top button