Karnataka News

*ಮತ್ತೆ ಆರಂಭವಾದ ಮಳೆ ಅಬ್ಬರ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಆರಂಭವಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಮೇಲೂ ಪರಿಣಾಮ ಬೀರಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

Home add -Advt

ಇನ್ನು ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Back to top button