Kannada NewsKarnataka NewsLatest

*ಮತ್ತೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಕಡಿಮೆಯಾಗಿದ್ದು, ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಆಗಸ್ಟ್ 3ರ ಬಳಿಕ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದಲ್ಲಿ ಆಗಸ್ಟ್ 3ರ ಬಳಿಕ ಮಳೆ ಜೋರಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

Home add -Advt

ಬೆಳಗಾವಿ, ಬೀದರ್, ಗದಗ, ಹಾವೇರಿ,ಧಾರವಾಡ, ಕಲಬುರ್ಗಿ, ಯಾದಗಿರಿ, ವಿಜಯಪುರ, ವಿಜಯನಗರ, ಬಳ್ಳಾರಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾದು, ದಕ್ಷಿಣ ಒಳನಾಡಿನ ಹಲವೆಡೆ ಇಂದು ಕೂಡ ಮಳೆ ಆಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ.

Related Articles

Back to top button