*ರಾಜ್ಯದ ಹಲವೆಡೆ ಮಳೆಯ ಮುನ್ಸೂಚನೆ*: *ನ.23ರಿಂದ 28ರವರೆಗೆ ಯಾವ ಜಿಲ್ಲೆಗಳಲ್ಲಿ ಮಳೆ?*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 23ರಿಂದ 28ರವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಮುಖ್ಯವಾಗಿ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಮುಂದಿನ ಆರು ದಿನಗಳ ಕಾಲ ರಾಜ್ಯದ ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ ಎಂಬ ವಿವರ ಇಲ್ಲಿದೆ.
ನವೆಂಬರ್ 23, ಸೋಮವಾರ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಇಲ್ಲ.
ನವೆಂಬರ್ 24, ಮಂಗಳವಾರ: ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗಬಹುದು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಸಾಧಾರಣ ಹಗುರ ಮಳೆಯ ನಿರೀಕ್ಷೆಯಿದೆ.
ಉತ್ತರ ಕನ್ನಡ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಶುಷ್ಕ ವಾತಾವರಣ ಮುಂದುವರಿಯಲಿದೆ.
ನವೆಂಬರ್ 25, ಬುಧವಾರ: ಚಿಕ್ಕಮಗಳೂರು, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗಬಹುದು.
ಇನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಾಗೂ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ನವೆಂಬರ್ 26, ಗುರುವಾರ: ಹಾಸನ, ಕೊಡಗು, ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಾಮರಾಜನಗರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆಯ ಸಾಧ್ಯತೆ ಕಡಿಮೆ ಇದ್ದು, ಶುಷ್ಕ ವಾತಾವರಣ ಕಂಡುಬರಲಿದೆ.
ನವೆಂಬರ್ 27, ಶುಕ್ರವಾರ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಾಮರಾಜನಗರ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ನವೆಂಬರ್ 28, ಶನಿವಾರ: ವಾರದ ಕೊನೆಯ ದಿನವಾದ ಶನಿವಾರ ಚಿಕ್ಕಮಗಳೂರು, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬೆಂಗಳೂರು ನಗರ, ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಾಮರಾಜನಗರ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಅದೇ ರೀತಿ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇಲ್ಲ.
ಒಟ್ಟಾರೆಯಾಗಿ ನವೆಂಬರ್ 23ರಿಂದ 28ರವರೆಗೆ ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಆಗಾಗ ಹಗುರ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕರ್ನಾಟಕದ ಬೆಳಗಾವಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಆರು ದಿನಗಳ ಕಾಲ ಒಣಹವೆಯೇ ಮುಂದುವರಿಯುವ ನಿರೀಕ್ಷೆಯಿದೆ.



