Latest

*ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ; 15 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರದ ಹಲವೆಡೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ವಿಜಯನಗರ, ಶಿವಮೊಗ್ಗ, ಹಾಸನ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ 15 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ 8 ಜಿಲ್ಲೆಗಳಲಿ 3 ದಿನಗಳಕಾಲ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

https://pragati.taskdun.com/illegal-stock-of-cooker-found-in-farm-house-on-border-of-2-constituencies/

Related Articles

Back to top button