LatestUncategorized
*ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ; ದರೆಗುರುಳಿದ ಮರಗಳು, ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ ಗುಡುಗು ಸಹಿತ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಲವೆಡೆ ಮರಗಳು ಧರಾಶಾಹಿಯಾಗಿದ್ದು, ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.
ಸಂಜೆಯಿಂದ ಬಿರುಗಾಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರರು ಪರದಾಟ ನಡೆಸಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ.
ಕಳೆದ ಒಂದು ವಾರದಿಂದ ಗರಿಷ್ಟ ತಾಪಮಾನ, ಬಿಸಿಲ ಝಳದಿಂದ ಬಸವಳಿದಿದ್ದ ಬೆಂಗಳೂರಿಗರಿಗೆ ಬಿರುಗಾಳಿ, ಗುಡುಗು ಮಿಂಚು ಸಹಿತ ಭಾರಿ ಮಳೆ ಹಲವೆಡೆ ಆತಂಕವನ್ನೇ ಉಂಟು ಮಾಡಿದೆ.




