
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಆದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಒಂದೆರಡುಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ. ಕರಾವಳಿಯ ಕೆಲವೆಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತಲೂ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ