Karnataka News

*ಮತ್ತೆ ರೆಡ್ ಅಲರ್ಟ್ ಘೋಷಣೆ: ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೇ ತಿಂಗಳಿನಲ್ಲಿಯೇ ಈ ಹಿಂದೆ ಕಂಡು ಕೇಳರಿಯದಷ್ಟು ಭಾರಿ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಜಿಲ್ಲೆಯ ಜನರು ವರುಣಾರ್ಭಟಕ್ಕೆ ಕಂಗೆಟ್ಟುಹೋಗಿದ್ದಾರೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related Articles

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮತ್ತೆ ಮುಂದುವರೆದಿದ್ದು, ಇಂದು ಕೂಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು ಸಂಭವಿಸುತ್ತಿದ್ದು, ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬಬ್ರ ಕೊಂಚ ಕಡಿಮೆಯಾಗಿದೆಯಾದರೂ ಇಂದು ಕೂಡ ಮಳೆಯಾಗಲಿದೆ ಈ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

Home add -Advt


Related Articles

Back to top button