ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವೆಡೆಗಳಲ್ಲಿ ತಾಪಮಾನ ಹೆಚ್ಚಿದ್ದು, ಬಿಸಿಲ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇಂದಿನಿಂದ ಐದು ದಿನಗಳ ಕಾಲ ಕೆಲವೆಡೆ ಮಳೆಯಾಗಲಿದ್ದು ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರ್ಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಯದಗಿರಿ, ಬಳ್ಳಾರಿ, ರಾಯಚೂರು, ಕಲಬುರ್ಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಏಪ್ರಿಲ್ 13ರರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳುರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಏಪ್ರಿಲ್ 13 ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ