ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಬೆಂಗಳೂರಿನಲ್ಲಿ ಎರಡು ದಿನಗಳಿಂದ ಮೋಡಕವಿದ ವಾತಾವರಣ ನಿರ್ಮಣವಾಗಿದೆ.
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಲಲ್ಲಿ ಜೂನ್ 7ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರವಾಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ