Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೂನ್ 29ರಿಂದ ಜುಲೈ 3ರವರೆಗೆ ಕರಾವಳಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದು ಗಂಟೆಗೆ 40-45 ಕೀ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button