Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಗಸ್ಟ್ ೩೦ರ ವರೆಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಹಾಗೂ ಈಶಾನ್ಯ ಭಾರತದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button