ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತವುಂಟಾಗಿದೆ. ಜಿಲ್ಲೆಯ ಜನರೇ ಕಂಗಾಲಾಗಿ ಹೋಗಿದ್ದಾರೆ.
ಮಡಿಕೇರಿ ತಾಲೂಕಿನ 2ನೇ ಮೊಣ್ಣಂಗೇರಿ ಗ್ರಾಮದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸುತವುತಾಗಿದ್ದು, 5 ಎಕರೆಯಷ್ಟು ಭೂಮಿ ಕೊಚ್ಚಿ ಬರುತ್ತಿದೆ. ನಿಶಾನಿ ಬೆಟ್ಟದ ಮೇಲ್ಭಾಗದಿಂದ ಕಲ್ಲುಗಳು, ಮಣ್ಣು, ಮರಗಳು ಕೊಚ್ಚಿ ಬಂದಿದ್ದು, ಭೂಕುಸಿತಕ್ಕೂ ಮೊದಲು ಭಯಂಕರ ಶಬ್ಧ ಕೇಳಿದೆ.
ಇನ್ನು ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆಯಾದರೂ ಆಗಾಗ ಮಳೆ ಸುರಿಯುತ್ತಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗಿದ್ದು, ಕೊಂಚ ಮೋಡಕವಿದ ವಾತಾವರಣ, ಅಲ್ಲಲ್ಲಿ ಬಿಸಿಲು ಕಂಡುಬರುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ