*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮೇ 30ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬಾಗಲಕೋಎ, ಬೆಳಗಾವಿ, ಬೀದರ್, ಧರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಂದೆರೆಡು ಕಡೆ ಮಳೆಯಾಗಲಿದ್ದು, ಬಹುತೇಕ ಕಡೆ ಒಣಹವೆ ಮುಂದುವರೆಯಲಿದೆ.

https://pragati.taskdun.com/shivaji-jayantiroad-diversionbelagavi/


Related Articles

Back to top button