
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲೆಗಳಲ್ಲಿ ಬಿಸಿಲಝಳ ಹೆಚ್ಚುತ್ತಿದ್ದರೆ ಇನ್ನು ಕೆಲ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಧಾರವಾಡದಲ್ಲಿ ಬಿರುಗಾಳಿ ಮಳೆಯಿಂದ ನಿರ್ಮಾಣ ಹಂತದ ಕಾರ್ಖಾನೆ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಘಟಗಿಯ ಕಾಡನಕೊಪ್ಪ ಗ್ರಾಮದಲ್ಲಿ ಈ ದುರಂತ ಸಂಭವಿಸುದೆ. ಹಳೆ ಹುಬ್ಬಳಿಯ ದಾವೂದ್ (52) ಹಾಗೂ ರಫಿಕ್ (50) ಮೃತ ದುರ್ದೈವಿಗಳು. ಘಟನೆಯಲ್ಲಿ ಅಂಚಟಗೇರಿಯ ಮಹಾಂತೇಶ್ ಎಂಬುವವರು ಗಾಯಗೊಂಡಿದ್ದಾರೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.