Latest

*ಬಿರುಗಾಳಿ ಮಳೆ ಅಬ್ಬರ; ಸಿಡಿಲು ಬಡಿದು ಇಬ್ಬರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಪರ್ ಜೋಯ್ ಚಂಡಮಾರುತ ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಮಳೆ ಅವಾಂತರಕ್ಕೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ರೈತರು ಮೃತಪಟ್ಟಿದ್ದಾರೆ. ಕಾಟಲಿಂಗಪ್ಪ (45) ರಾಜಪ್ಪ (40) ಮೃತರು.

ಹೊಲದಲ್ಲಿ ಬಿತ್ತನೆಗೆ ತೆರಳುತ್ತಿದ್ದ ಇಬ್ಬರೂ ಭಾರಿ ಮಳೆಗೆ ಮರದ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ಸಿಡಿಲು ಬಡಿದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ, ಗ್ರಾಮಾಂತರ, ಮಂಡ್ಯ, ರಾಮನಗರ ಭಾಗಗಳಲ್ಲಿ ಹಲವೆಡೆ ಭಾರಿ ಮಳೆಯಿಂದ ಅವಾಅಂತರಗಳು ಸೃಷ್ಟಿಯಾಗಿವೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗಗಳಲ್ಲಿ ಭಾರಿ ಮಳೆಯಾಗಿದೆ.

Home add -Advt

ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://pragati.taskdun.com/prabhakara-korekle-jnmc-research-unitplaying-a-major-rolematernal-and-new-born-health-globally/

Related Articles

Back to top button