ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಇನ್ನು ಕಲಬುರ್ಗಿ ಜಿಲ್ಲೆಯಲ್ಲಿ ಅತ್ಯಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲ ಝಳಕ್ಕೆ ಜನರು ತತ್ತರಿಸಿದ್ದಾರೆ. ಕಲಬುರ್ಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಹೆಚ್ ಎ ಎಲ್ ನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಹಲವೆಡೆ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಬೇಗೆಗೆ ಜನರು ಕಂಗೆಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ