Kannada NewsKarnataka NewsLatest

*ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ; ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Home add -Advt

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ, ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೀದರ್, ಬೆಳಗಾವಿ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಯಾದಗಿರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಕರವಾಳಿಯ ಮೂರು ಜಿಲ್ಲೆಗಳು ಹಾಗೂ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button