
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಕೊರತೆಯಿಂದಾಗಿ ರಾಜ್ಯದ ರೈತರು ಸಂಕಷ್ಟಕ್ಕೀಡಾಗಿದ್ದರು. ಹಲವೆಡೆ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿತ್ತು. ಇದೀಗ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆ.27ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಬೆಳಿಗ್ಗೆ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ