Kannada NewsKarnataka NewsLatest

*ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವೆಡೆ ಡಿಸೆಂಬರ್ 3ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಬೆಂಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಒಂದೆರಡು ಕಡೆ ಮಳೆಯಾಗಲಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡಿನ ಪುದುಚೆರಿ, ಕಾರೈಕಲ್, ತಂಜಾವೂರು, ಶಿವಗಂಗಾ, ರಾಣಿಪೆಟ್ಟೆ, ನಾಗಪಟ್ಟಂ, ಕಾಂಚಿಪುರಂ, ಚೆನ್ನೈ, ತಿರುವಳ್ಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


Related Articles

Back to top button