Karnataka News

*ಮಳೆ ಅಬ್ಬರ ಕಡಿಮೆಯಾದರೂ ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಅಬ್ಬರ ಇಂದಿನಿಂದ ಕೊಂಚ ಕಡಿಮೆಯಾಗಲಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿಯೂ ವರುನಾರ್ಭಟ ಕಡೆಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಾ ಸ್ವಲ್ಪ ತಗ್ಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಶಿವಮೊಗ್ಗ ಜಿಲ್ಲೆಯಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಬೀದರ್, ಕಲಬುರ್ಗಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯನಗರ, ಧಾರವಾಡ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೊಡಗು, ಕೋಲಾರ, ಚಾಮರಾಜನಗರ, ಮಂಡ್ಯ, ರಾಮನಗರ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button