Karnataka News

*ಈ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಕಡಬ ತಾಲೂಕುಗಳಲ್ಲಿ ಸ್ವಲ್ಪ ಕಡಿಮೆ ಇರಬಹುದು. ಉಡುಪಿ ಸಾಮಾನ್ಯ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 11ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಮೋಡ ಹಾಗೂ ಒಂದೆರಡು ಕಡೆ ತುಂತುರು ಮುನ್ಸೂಚನೆ ಇದ್ದು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಡಿಸೆಂಬರ್ 10ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ.

Home add -Advt

ಒಳನಾಡು: ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಳಿದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚೆನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಹಾಗೂ ನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

Related Articles

Back to top button