ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಾಲು ಸಾಲು ದುರಂತಗಳು ಸಂಭವಿಸುತ್ತಿವೆ. ಈ ನಡುವೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 29ರವರೆಗೆ ಧಾರಾಕಾರ ಮಳೆಯಾಗಲಿದೆ. ಈ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿಯೂ ಭಾರಿ ಮಳೆಆಗಲಿದ್ದು, ಯೆಲ್ಲೋನ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ