
ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಈ ನಡುವೆ ಇನ್ನೂ ಮೂರು ದಿನಗಳಾಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂದಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.
ಉತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಮಂಗಳೂರು, ಉಡುಪಿಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಒಂದೆಡೆ ಭೂ ಕುಸಿತವಾಗುವ ಭೀತಿ ಎದುರಾಗಿದೆ. ಚಿಕ್ಕಮಗಳೂರಿನಲ್ಲಿ ಭಾರಿ ಮಳೆಗೆ ಕಳಸ ಬಳಿಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಗ್ರಾಮಗಳು ಮುಳುಗಡೆಯಾಗುವ ಆತಂಕದಲ್ಲಿ ಜನರು ಕಾಲ ಕಳೆಯುತ್ತಿದ್ದಾರೆ.
ಕೊಡಗು ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಭಾಗಮಂದಲ-ನಾಪೋಕ್ಲು ರಸ್ತೆ ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ಸಂಪರ್ಕವಿಲ್ಲದೇ ಜನರು ಪರದಾಡುತ್ತಿದ್ದಾರೆ. ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಫೆಮಿನಾ ಮಿಸ್ ಇಂಡಿಯಾ-2022 ಕಿರೀಟ ಗೆದ್ದ ಕರ್ನಾಟಕದ ಸಿನಿ ಶೆಟ್ಟಿ