ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಅಲ್ಲಲ್ಲಿ ಸಾಧಾರಾಣ ಮಳೆಯಾಗುತ್ತಿದೆ. ಇದರಿಂದ ರೈತರು ಮತ್ತೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
ಕೆಲವು ದಿನಗಳ ಕಾಲ ಮಾತ್ರ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆರಾಯ ಇದೀಗ ಸಂಪೂರ್ಣ ತಣ್ಣಗಾಗಿದ್ದಾನೆ. ಆದರೆ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಧರವಾಡ, ಕೊಪ್ಪಳ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ಕೊಡಗು, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಕರಾವಳಿಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ