Kannada NewsKarnataka NewsLatest

*ಹಲವೆಡೆ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಆಗಸ್ಟ್ 24ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಇದೇ ವೇಳೆ ಉತ್ತರ ಒಳನಾಡಿನ ಕೆಲವೆಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಕರಾವಳಿ ಜಿಲ್ಲೆಗಲಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಳಗಾವಿ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಹಲವೆಡೆ ಇಂದು ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ತೆಲಂಗಾಣದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆಯಾಗಲಿದೆ. ಮಹಾರಾಷ್ಟ್ರದಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Related Articles

Back to top button