Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ವರೆಗೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಳೆ ಇಲ್ಲದೇ ಬೆಳೆಯೆಲ್ಲ ಒಣಕಿ ಕಂಗಾಲಾಗಿದ್ದ ರೈತನ ಮೊಗದಲ್ಲಿ ಕೊಂಚ ಮಂದಹಾಸ ಮೂಡುವಂತಾಗಿದೆ ನಿನ್ನೆಯಿಂದ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಕೊಪ್ಪಳ, ಯಾದಗಿರಿ, ಗದಗ, ರಾಯಚೂರು, ಹಾವೇರಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ತುಮಕೂರು, ಚಿಕ್ಕಮಗಳೂರು,ಹಾಸನ, ಕೊಡಗು, ಶಿವಮೊಗ್ಗ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಆಗಾಗ ಬಿಸಿಲು ಇರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ದಾಧ್ಯತೆ ಇದೆ. ರಾಜಧಾನಿಯಲ್ಲಿ ಸೆಕೆ ಕೂಡ ಇದ್ದು, ಹೆಚ್ ಎ ಎಲ್ ನಲ್ಲಿ 32.0 ಡಿಗ್ರಿ ಗರಿಷ್ಠ ತಾಪಮಾನವಿರಲಿದೆ. ಬೆಂಗಳೂರು ನಗರದಲ್ಲಿಯೂ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.


Related Articles

Back to top button