Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆ.16ವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಮುಂದಿನ 6 ದಿನ ಅತಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.

ಮುಂದಿನ 24 ಗಂಟೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Related Articles

Back to top button