Uncategorized

*ಮುಂದಿನ 48 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ರಾಯಚೂರು, ಯಾದಗಿರಿ, ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

Home add -Advt

ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲದಿನಗಳಿಂದ ಬೆಂಗಳೂರು, ಶಿವಮೊಗ್ಗ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಿದ್ದು, ಬಿಸಿಲಿನ ಝಳಕ್ಕೆ ಜನರು ಕಂಗೆಟ್ಟಿದ್ದಾರೆ. ಮುಂದಿನ 48 ಗಂಟೆಗಳಲ್ಲಿ ವರುಣನ ಸಿಂಚನವಾಗುವ ಸಾಧ್ಯತೆಯಿದ್ದು, ಬಿಸಿಲ ಧಗೆ ತಂಪಾಗುವ ನಿರೀಕ್ಷೆಯಿದೆ.

https://pragati.taskdun.com/2nd-pu-resultannuncekarnataka/


Related Articles

Back to top button