Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 17ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲ ದಿನ ಸಾಧಾರಣ ಮಳೆಯಾಗಲಿದೆ. ಆದರೆ ಈ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 16 ಹಾಗೂ 17ರಂದು ಭಾರಿ ಮಳೆಯಾಗಲಿದೆ.

Home add -Advt

ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ, ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 16ರಿಂದ ಮಳೆ ಹೆಚ್ಚಾಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಗಾಳಿ ಸಹಿತ ಮಳೆಯಗಲಿದ್ದು, ಗಾಳಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Related Articles

Back to top button