Kannada NewsKarnataka NewsLatest

*ಹತ್ತು ದಿನಗಳ ಕಾಲ ರಾಜ್ಯದಲ್ಲಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಹತ್ತು ದಿನಗಳ ಕಾಲ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ಮೂರು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಮುಂದಿನ ಹತ್ತು ದಿನಗಳವರೆಗೆ ಉತ್ತಮ ಮಳೆಯಾಗಲಿದೆ.

Home add -Advt

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬಳ್ಳಾರಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಕೋಲಾರ,ತುಮಕೂರು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿದ್ದ ಸಮಸ್ಯೆ ಕೊಂಚ ಮಟ್ಟಿಗೆ ದೂರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button