Kannada NewsKarnataka NewsLatest

*ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಬಹುತೇಕ ಜಿಲೆಗಳಲ್ಲಿ ಮಳೆಯಾಗುತ್ತಿದ್ದು, 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಹಾವೇರಿ, ಬೀದರ್, ರಾಯಚೂರು, ಕಲಬುರ್ಗಿ, ಬೆಳಗಾವಿಯ ಕೆಲವೆಡೆ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button