Kannada NewsKarnataka NewsLatest
*ಹಲವು ಜಿಲ್ಲೆಗಳಲ್ಲಿ 6 ದಿನಗಳ ಕಾಲ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕೊಂಚ ಕಡಿಮೆಯಾಗಿದೆ. ಬೆಳಗಾವಿ, ಬೀದರ್, ಗದಗ, ಧರವಾಡ, ಹಾವೇರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಕ್ಟೋಬರ್ 6ವರೆಗೆ ಮಳೆಯಾಗಲಿದೆ.
ರಾಜ್ಯದಲ್ಲಿ ಅತಿ ಹೆಚ್ಚು ಉಷ್ಣಾಂಶ ಮೈಸೂರಿನಲ್ಲಿ ದಾಖಲಾಗಿದ್ದು, 32.0ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗಿದೆ.




