
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿ ಆರಂಭವಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ನವೆಂಬರ್ 7ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಹಾಗು ಕರಾವಳಿ ಭಾಗದ ಕೆಲ ಜಿಲ್ಲೆಗಳಲ್ಲಿ ನ.3ರಿಂದ 7ರವರೆಗೆ ಮಳೆಯಾಗಲಿದೆ. ಶಿವಮೊಗ್ಗ, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಹಲವೆಡೆಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಹೆಚ್ಚು ದಾಖಲಾಗಿದೆ. ವಿಜಯಪುರ, ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ