Latest

*20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ; ಕೆಲವೆಡೆ ಆಲಿಕಲ್ಲು ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮಳೆಯಾಗಲಿದೆ.

Home add -Advt

ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ರಾಮನಗರ, ತುಮಕೂರು, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.

ಪ್ರಮುಖವಾಗಿ ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

https://pragati.taskdun.com/vidhanasabha-electionghataprabha-checkpost15kg-silver-ornamentsseized/


Related Articles

Back to top button