ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿನ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ನಡಿವೆ ಕರ್ನಾಟಕದಲ್ಲಿಯೂ ಕೆಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಒಣ ಹವೆ ಇದ್ದು, ನವೆಂಬರ್ 19ರಿಂದ 3 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು ಹಾಗು ದಕ್ಷಿಣ ಒಳನಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಸಂಜೆ ವೇಳೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರದಲ್ಲಿ 15.5 ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನ ಕೆಲವೆಡೆಗಳಲ್ಲಿ ಎರಡು ದಿನಗಳಿಂದ ಕಡಿಮೆ ಉಷ್ಣಾಂಶ ದಾಖಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ