
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್ 9ರಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.
ಕಾರವಾಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವೆಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಬಾಗಲಕೋಟೆ, ಕೊಪ್ಪಳ, ಗದಗ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇಂದು ರಾಜಧಾನಿ ಬೆಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲು ಬರುವ ಸಾಧ್ಯತೆ ಇದೆ. ಚಿಕ್ಕನಹಳ್ಳಿಯಲ್ಲಿ 16.6 ಡಿಗ್ರಿ ಸೆನ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ