Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಮಳೆ, ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಕೆ*

ಪ್ರಗತಿವಾಹಿನಿ ಸುದ್ದಿ: ಒಂದೆಡೆ ಬಿರುಬೇಸಿಗೆ, ಮತ್ತೊಂದೆಡೆ ನೀರಿನ ಸಮಸ್ಯೆ. ಈ ನಡುವೆ ಮಳೆರಾಯ ರಾಜ್ಯದ ಜನತೆಗೆ ಕೊಂಚ ತಂಪೆರೆಯಲಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಇನ್ನು ಮುಂದಿನ 5 ದಿನಗಳ ಕಾಲ ಬೆಳಗಾವಿ, ಕೊಪ್ಪಳ, ಹಾವೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ.


Related Articles

Back to top button