
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂದಿನ 24 ಗಂಟೆಯಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು ಭಾಗದಲ್ಲಿ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ ಸುರಿಯುತ್ತಿದ್ದು, ಕೆಲಹೊತ್ತಲ್ಲೇ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಕೊಡಗು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಬೆಂಗಳೂರು ನಗರ, ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಉಷ್ಣಂಶ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್ ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ವ್ಯಾಪಕ ಮಾಳೆಯಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ