Kannada NewsKarnataka NewsLatest

*ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರು ಹಾಗೂ ಅರಮನೆ ನಗರಿ ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಬಿಸಿಲ ಝಳ ಕೊಂಚ ಕಡಿಮೆಯಾಗಿದೆ. ಆದರೆ ಉತ್ತರ ಕರ್ನಾಟಕ ಭಾಗದ ಹಲವೆಡೆಗಳಲ್ಲಿ ತಾಪಮಾನ ಹೆಚ್ಚಾಗಿದೆ.

ಈ ನಡುವೆ ರಾಜ್ಯದಲ್ಲಿ ಇಂದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯನಗರ, ವಿಜಯಪುರ, ರಾಯಚೂರು, ಯಾದಗಿರಿ, ಬೆಂಗಖೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನು ರಾಯಚೂರು, ಕಲಬುರ್ಗಿಯಲ್ಲಿ 44.೦ ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಬಾಗಲಕೋಟೆಯಲ್ಲಿ 41 ಡಿಗ್ರಿ, ಬೆಳಗಾವಿಯಲ್ಲಿ 39.0 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Back to top button