Latest

*ಭಾರೀ ಮಳೆ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ವರುಣಾರ್ಭಟ ಜೋರಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮೇ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಚಿತ್ರದುರ್ಗ, ಕೊಡಗು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಶಿವಮೊಗ್ಗ, ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಇಂದು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button