Karnataka News

*ಈ ಜಿಲ್ಲೆಗಳಲ್ಲಿ ಮೇ 28ರವರೆಗೆ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮೇ 28ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೋಲಾರ, ಮಂಡ್ಯ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ,ಮೈಸೂರು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಮಂಡ್ಯ, ಕೋಲಾರ, ವಿಜಯನಗರ, ಯಾದಗಿರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ಬೀದರ್, ಕಲಬುರ್ಗಿ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.


Related Articles

Back to top button