ಪ್ರಗತಿವಾಹಿನಿ ಸುದ್ದಿ: ಮುಂಗಾರು ಪೂರ್ವ ಮಳೆ ಅಬ್ಬರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅನಾಹುತಗಳನ್ನು ಸೃಷ್ಟಿಸಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆರಾಯ ಕೆಲ ದಿನಗಳವರೆಗೆ ಬ್ರೇಕ್ ನೀಡಿದಂತಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಎರಡು ಮೂರು ದಿನ ಮಳೆಯಾಗುವ ಸಾಧ್ಯತೆ ಕಡಿಮೆ. ಮೋಡಕವಿದ ವಾತಾವರಣವಿರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಹಾಗೂ ರಾಜ್ಯದ ಹಲವೆಡೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಮೇ 31ಕ್ಕೆ ಕೇರಳಕ್ಕೆ ಮುಂಗಾರು ಎಂಟ್ರಿ ಕೊಡಲಿದ್ದು, ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿಯೂ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು, ಹಲವೆಡೆ ವಿದ್ಯುತ್ ಕಡಿತಗೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ