Latest

*ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಹಲವೆಡೆ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನದ ಬಳಿಕ ಅಥವಾ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

Related Articles

Back to top button